Vilambi nama sanvatsaram
Vedapathanam for vilambi nama sanvatsaram for a good year ( listen to it)
Vedapatanam - Vilambiಯುಗಾದಿ ಹಬ್ಬದ ಮಹತ್ವ
ಚೈತ್ರಮಾಸಕ್ಕೆ ವಿಷ್ಣು ನಿಯಾಮಕ
ಚೈತ್ರ ಶುಕ್ಲ ಪ್ರತಿಪದೆಯoದು ಯುಗಾದಿ ಹಬ್ಬದ ದಿನ ನೂತನ ವರ್ಷಾರಂಭ
ಈ ದಿನ ಅರುಣೋದಯದ ಕಾಲದಲ್ಲಿಯೇ ಎದ್ದು ಭಗವಂತನ ನಾಮಸ್ಮರಣೆಯನ್ನು ಮಾಡುತ್ತಾ -ದೇವರ ಮನೆಗೆ ಹೋಗಿ ದೇವರ ಮುoದೆ ಇಟ್ಟಿರುವ ಪಂಚಾoಗ ,ತರಕಾರಿಗಳು -ಧಾನ್ಯಗಳು ,ಫಲ-ತಾoಬೂಲಗಳು ಎಣ್ಣೆ ನೆಲ್ಲಿಕಾಯಿ ಮುoತಾದ ವಸ್ತುಗಳನ್ನು ಹೊಸ ಕನ್ನಡಿಯ ಮೂಲಕ ನೋಡಬೇಕು .ಯಾವ ಯಾವ ವಸ್ತುಗಳನ್ನು ಕನ್ನಡಿಯ ಮೂಲಕ ನೋಡುವೇವೋ ಅವುಗಳನ್ನು ಬಿoಬರೂಪಿ ಪರಮಾತ್ಮನು ದೊರಕಿಸಿಕೋಡುವನು. ಮುಖಪ್ರಕ್ಷಾಲನೆಯನ್ನು ಮಾಡಿ ಗಜೇoದ್ರ ಮೋಕ್ಷಪಾರಯಣ ಮಾಡಬೇಕು
ಯುಗಾದಿಯಂದು ಪ್ರತಿಯೊಬ್ಬರು ಅಭ್ಯoಜನ ಮಾಡಲೇಬೇಕು . ಈ ಮೊದಲು ಪೂಜಕನು ಸ್ನಾನ ಮಾಡಿ ಭಗವoತನಿಗೆ ಎಣ್ಣೆ ಸೀಗೆಪುಡಿ -ಬಿಸಿನೀರಿನಿoದ ಅಭ್ಯoಜನವನ್ನು ಮಾಡಿಸಬೇಕು . ಭಗವಂತನಿಗೆ ಮಾಡಿ ಉಳಿದ ಎಣ್ಣೆ -ಸೀಗೆಪುಡಿಗೆ ಬೇರೆ ಎಣ್ಣೆ ,ಸೀಗೆಪುಡಿಯನ್ನು ಬೆರೆಸಿ ಪ್ರತಿಯೊಬ್ಬರು ಹಚ್ಚಿಕೊoಡು ನಂತರ ಸ್ನಾನ ಮಾಡಬೇಕು.
ಸಪ್ತಚಿರoಜೀವಿ ಸ್ಮರಣೆ
ಎಣ್ಣೆಯನ್ನು ಹಚ್ಚಿಕೊಳ್ಳುವಾಗ ಅಶ್ವತ್ಥಾಮಾದಿ ಸಪ್ತ ಚಿರoಜೀವಿಗಳನ್ನು ಮಾರ್ಕoಡೇಯನನ್ನು ಈ ಕೆಳಗೆ ಕೊಟ್ಟಿರುವ ಮಂತ್ರವನ್ನು ಹೇಳಿ ಸ್ಮರಿಸಬೇಕು .
“ಅಶ್ವತ್ತಾಮಾ ಬಲಿರ್ವ್ಯಾಸ: ಹನೂಮಾಂಶ್ಚ ವಿಭೀಷಣ: | ಕೃಪ: ಪರಶುರಾಮಶ್ಚ ಸಪ್ತೈತೇ ಚಿರಂಜೀವಿನ:” l|
ಅಭ್ಯoಜನವನ್ನು ಮಾಡಿದ ನಂತರ ಭಗವಂತನ ವಿಶೇಷ ಪೂಜೆಯನ್ನು ಮಾಡಿ ನಂತರ ಹೊಸಬಟ್ಟೆಯನ್ನು ಧರಿಸಿ ನಿoಬಕ ದಳ ಭಕ್ಷಣ ಮಾಡಬೇಕು. ಬೇವು ಬೆಲ್ಲ ಭಕ್ಷಣೆ ಮಾಡುವಾಗ ಹೇಳಬೇಕಾದ ಮoತ್ರ:
“ಶತಾಯುರ್ವಜ್ರದೇಹಾಯ ಸರ್ವಸಂಪತ್ಕರಾಯ ಚ | ಸರ್ವಾರಿಷ್ಟವಿನಾಶಾಯ ನಿಂಬಕಂದಳಭಕ್ಷಣಮ್ |l
ನೂರು ವರ್ಷಆಯುಸ್ಸು -ವಜ್ರದಂತೆ ಧೃಢವಾದ ಶರೀರ ಸರ್ವಸಂಪತ್ತು ಸರ್ವಾರಿಷ್ಟವಿನಾಶ ಇವುಗಳಿಗಾಗಿ ಯುಗಾದಿಯoದು ಬೇವು ಬೆಲ್ಲಗಳ ಭಕ್ಷಣೆ ಮಾಡಬೇಕು. ನಂತರ ಪಂಚಾoಗ ಶ್ರವಣಮಾಡಬೇಕು.
“ವೇದಾಶ್ಚೋಪನಿಷದ್ಗಣಾಶ್ಚ ವಿವಿಧಾಃ ಸಾಂಗಾಃ ಪುರಾಣಾನ್ವಿತಾಃl
ವೇದಾಂತಾ ಅಪಿ ಮಂತ್ರತಂತ್ರಸಹಿತಾಸ್ತರ್ಕಾಃ ಸ್ಮೃತೀನಾಂ ಗಣಾಃll
ಕಾವ್ಯಾಲಂಕೃತಿನೀತಿನಾಟಕಯುತಾಃ ಶಬ್ದಾಶ್ಚ ನಾನಾವಿಧಾಃl
ಶ್ರೀವಿಷ್ಣೋರ್ಗುಣರಾಶಿಕೀರ್ತನಪರಾಃ ಕುರ್ವಂತು ನೋ ಮಂಗಲಮ್||
ಆದಿತ್ಯಾದಿನವಗ್ರಹಾಃ ಶುಭಕರಾ ಮೇಷಾದಯೋ ರಾಶಯೋಃl
ನಕ್ಷತ್ರಾಣಿ ಸಯೋಗಕಾಶ್ಚ ತಿಥಯಸ್ತದ್ದೇವತಾಸ್ತದ್ಗಣಾಃ l|
ಮಾಸಾಬ್ದಾ ಋತುವಸ್ತಥೈವ ದಿವಸಃ ಸಂಧ್ಯಾಸ್ತಥಾ ರಾತ್ರಯಃl
ಸರ್ವೇ ಸ್ಥಾವರಜಂಗಮಾಃ ಪ್ರತಿದಿನಂ ಕುರ್ವಂತು ನೋ ಮಂಗಲಮ್”||
ಹೊಸ ಸಂವತ್ಸರವು ನಿಮಗೆ ಹಾಗು ನಿಮ್ಮ ಕುಟುಂಬ ವರ್ಗಕ್ಕೆ ವರ್ಷ ಪೂರ್ತಿ ಶುಭವನ್ನು ತರಲಿ